ಕರ್ನಾಟಕ ಸರ್ಕಾರ
ಶ್ರೀ ಸಿದ್ದರಾಮಯ್ಯ
ಮಾನ್ಯ ಮುಖ್ಯಮಂತ್ರಿಗಳು
ಡಾ. ಹೆಚ್.ಸಿ. ಮಹದೇವಪ್ಪ
ಸಚಿವರು, ಸಮಾಜ ಕಲ್ಯಾಣ ಇಲಾಖೆ
ನಮ್ಮ ಬಗ್ಗೆ
ಸಮಾಜ ಕಲ್ಯಾಣ ಇಲಾಖೆಯು ಕರ್ನಾಟಕ ಸರ್ಕಾರ ಸಚಿವಾಲಯದ ಒಂದು ಇಲಾಖೆಯಾಗಿದ್ದು, ಸನ್ಮಾನ್ಯ ಸಮಾಜ ಕಲ್ಯಾಣ ಸಚಿವರು ಖಾತೆಯನ್ನು ಹೊಂದಿರುತ್ತಾರೆ. ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಇಲಾಖೆಯ ಮುಖ್ಯಸ್ಥರಾಗಿರುತ್ತಾರೆ. ಇಲಾಖೆಯಲ್ಲಿ ಸರ್ಕಾರದ ಜಂಟಿ ಕಾರ್ಯದರ್ಶಿಗಳು, ಸರ್ಕಾರದ ಉಪ ಕಾರ್ಯದರ್ಶಿಗಳು, ಕಾನೂನು ಕೋಶದ ಮುಖ್ಯಸ್ಥರು, ಅಧೀನ ಕಾರ್ಯದರ್ಶಿಗಳು ಮತ್ತು ಶಾಖಾಧಿಕಾರಿಗಳು ಹಾಗೂ "ಸಿ" ಮತ್ತು "ಡಿ" ವೃಂದದ ನೌಕರರುಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯು ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977 ರನ್ವಯ ನಿಗಧಿಪಡಿಸಿದ ಪ್ರಕಾರ್ಯಗಳನ್ನು ನಿರ್ವಹಿಸುತ್ತದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಈ ಕೆಳಕಂಡ ಕ್ಷೇತ್ರ ಇಲಾಖೆಗಳು ಹಾಗೂ ನಿಗಮ/ಮಂಡಳಿಗಳಿಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಹಾಗೂ ಸೇವೆಗಳಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳನ್ನು ಸಹ ನಿರ್ವಹಿಸಲಾಗುತ್ತದೆ.